ನೋಡಾಖಲಿ, ಡಿ. 01 (DaijiworldNews/HR): ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಪರಗಣ ಜಿಲ್ಲೆಯ ನೋಡಾಖಲಿ ಪ್ರದೇಶದಲ್ಲಿ ಅಶಿಮ್ ಮೊಂಡಲ್ ಅವರಿಗೆ ಸೇರಿದ ಎರಡು ಮಹಡಿಗಳ ಮನೆಯಲ್ಲಿ ಸ್ಫೋಟ ಸಂಭವಿಸಿದೆ.
ಈ ಘಟನೆಯಲ್ಲಿ ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.