ಬೆಂಗಳೂರು, ಡಿ.02 (DaijiworldNews/PY): "ನಾನು ಮಾಧ್ಯಮ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿದ್ದೇನೆ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಆರೋಗ್ಯ ಸಚಿವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ" ಎಂದಿದ್ದಾರೆ.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಿಎಂ, "ಈಗಾಗಲೇ ಯಲಹಂಕ ಶಾಸಕ ವಿಶ್ವನಾಥ್ ವಿಷಯದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಕಮಿಷಬನರ್ ಪ್ರಾಥಮಿಕ ತನಿಖೆ ಮಾಡಲಿದ್ದಾರೆ. ಕಾನೂನಿನ ಪ್ರಕಾರವೇ ಪೊಲೀಸರು ತನಿಖೆ ನಡೆಸಲಿದ್ದಾರೆ" ಎಂದು ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಡಿ.2ರಂದುದೆಹಲಿಗೆ ತೆರಳಲಿದ್ದು, ಆ ವೇಳೆ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿಯಲ್ಲಿರುವ ಕೊರೊನಾ ಕಾರ್ಯಕರ್ತರು ಲಸಿಕೆ ಪಡೆದು 6 ತಿಂಗಳಾಗಿರುವ ಹಿನ್ನೆಲೆ ಅವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕವಾಗಿ ಆಗಿರುವ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸ್ಸುಗಳ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದರು.