ಮುಂಬೈ, ನ. 02 (DaijiworldNews/HR): ವರ್ಷದಲ್ಲಿ 6 ತಿಂಗಳು ವಿದೇಶದಲ್ಲಿಯೇ ಇದ್ದರೆ ರಾಜಕಾರಣ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ರಾಹುಲ್ ಗಾಂಧಿ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಬಿಜೆಪಿ ವಿರುದ್ಧ ಹೋರಾಟ ನಡೆಸಲು ಪರ್ಯಾಯ ವ್ಯವಸ್ಥೆಯಾಗಬೇಕು. ಹೋರಾಟ ಮಾಡದ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು "ಮುಂದಿನ ದಿನಗಳಲ್ಲಿ ಸಂಯುಕ್ತ ಪ್ರಗತಿಶೀಲ ಮೈತ್ರಿಕೂಟ ಎನ್ನುವುದು ಇರುವುದಿಲ್ಲ. ಯುಪಿಎ ಎನ್ನುವುದು ಇತಿಹಾಸವಾಗಿದ್ದು, ಯುಪಿಎ ಎಂದರೇನು? ಅದು ಎಲ್ಲಿದೆ? ಎಂದ ಅವರು, ಹೋರಾಟ ಮಾಡದ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.