ನವದೆಹಲಿ, ನ. 02 (DaijiworldNews/HR): ಕರ್ನಾಟಕ, ಆಂಧ್ರಪ್ರದೇಶ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಡಿಸೆಂಬರ್ನಿಂದ ಫೆಬ್ರವರಿವರೆಗೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ವಾಯುವ್ಯ ಭಾರತಕ್ಕೆ ಸಾಮಾನ್ಯ ಮಳೆ ಸಂಭವನೀಯತೆ ಗಿಂತ ಕಡಿಮೆ ಇರಲಿದ್ದು, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಸಾಮಾನ್ಯ ಸರಾಸರಿ ತಾಪಮಾನ ಇರಲಿದೆ. ಪೂರ್ವ ಮತ್ತು ಪಶ್ಚಿಮ ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇನ್ನು ನವೆಂಬರ್ನಲ್ಲಿ ಅನೇಕ ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ತಮಿಳುನಾಡಿನಲ್ಲಿ ಸುರಿದ ಭಾರೀ ಮಳೆಗೆ 8 ಜನರು ಮೃತಪಟ್ಟಿದ್ದರೆ.
ಅಕ್ಟೋಬರ್ನಲ್ಲಿ ಕೇರಳದಲ್ಲಿ ಧಾರಾಕಾರ ಮಳೆಗೆ 27 ಜನರು ಹಾಗೂ ಆಂಧ್ರಪ್ರದೇಶದಲ್ಲಿ 44 ಜನರು ಭಾರೀ ಮಳೆಗೆ ಮೃತಪಟ್ಟಿದ್ದಾರೆ.