ಕಲಬುರಗಿ, ಡಿ.02 (DaijiworldNews/PY): ಭಜ್ಜಿ ಕೊಡಿಸುವ ನೆಪದಲ್ಲಿ 70 ವರ್ಷದ ವೃದ್ಧ 13 ವರ್ಷದ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನವೆಂಬರ್ 29ರಂದು ಈ ಘಟನೆ ನಡೆದಿದ್ದು ಎನ್ನಲಾಗಿದ್ದು, ಡಿ.1ರ ಬುಧವಾರದಂದು ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಅಫಜಲಪುರ ತಾಲೂಕಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಮಿರ್ಚಿ ಭಜ್ಜಿ ಕೊಡಿಸುವುದಾಗಿ ಬಾಲಕಿಯನ್ನು ಯಾಮಾರಿಸಿ ಕೃತ್ಯ ಎಸಗಲಾಗಿದೆ ಎಂದು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದರೆ.
ಈ ಬಗ್ಗೆ ರೇವೂರ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.