ಬೆಂಗಳೂರು, ಡಿ 02 (DaijiworldNews/MS): ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಮ್ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೊಸಕೆರೆಹಳ್ಳಿ ಬಳಿ 3 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ
84 ವರ್ಷದ ಶಿವರಾಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.