ಬೆಂಗಳೂರು,ನ. 02 (DaijiworldNews/HR): ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲಿಸ್ ಠಾಣೆಗೆ ಶಾಸಕ ವಿಶ್ವನಾಥ್ ಅವರು ವಿಚಾರಣೆಗೆ ಹಾಜರಾಗಿದ್ದಾರೆ.
ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಎಂಬುವವರು ಸ್ಕೆಚ್ ಹಾಕಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾನುಕುಂಟೆ ಪೊಲೀಸರು ವಿಶ್ವನಾಥ್ ಗೆ ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನನ್ನ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಪೊಲೀಸರು ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ. ಆಡಿಯೋ, ವಿಡಿಯೋ ಕೂಡ ಬಹಿರಂಗವಾಗಿದ್ದು, ತನಿಖಾಧಿಕಾರಿಗಳು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ" ಎಂದು ಹೇಳಿದ್ದಾರೆ.