ಹಾವೇರಿ, ಡಿ.02 (DaijiworldNews/PY): ಆನ್ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ದೇವರಗುಡ್ಡದ ಹೈಸ್ಕೂಲ್ನ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಕಳೆದ ವರ್ಷ ಆನ್ಲೈನ್ ಕ್ಲಾಸ್ನ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಆನ್ಲೈನ್ ಪಾಠ ಮಾಡುವ ನೆಪದಲ್ಲಿ ಪ್ರತಿನಿತ್ಯ ಮೆಸೇಜ್ ಮಾಡುತ್ತಿದ್ದ.
ಶಿಕ್ಷಕ ಕಿಸ್ ಕೊಡು ಎಂದು ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಶಿಕ್ಷಕ ಕಳುಹಿಸಿದ ವ್ಯಾಟ್ಸ್ಆಪ್ ಸಂದೇಶ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ಈ ಬಗ್ಗೆ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.