ನವದೆಹಲಿ, ಡಿ 02 (DaijiworldNews/MS): 2024 ರಲ್ಲಿ ನಡೆಯಲಿರುವ ಮುಂದಿನ ಲೋಕಸಭೆ ಚುನಾವಣೆಯಲ್ಲಿಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಇಲ್ಲ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.
ಜಮ್ಮುವಿನಲ್ಲಿ ಗಡಿ ಜಿಲ್ಲೆ ಪೂಂಚ್ನಲ್ಲಿ ಪಕ್ಷದ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ನಾನು ಬಯಸುತ್ತೇನೆ ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 300 ಸಂಸದರನ್ನು ಗೆಲ್ಲಿಸಿಕೊಂಡು ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ದೊಡ್ಡ ರಾಜಕೀಯ ಹುನ್ನಾರ. ಈ ಬಗ್ಗೆ ನಾನು ಸಂಸತ್ನಲ್ಲಿ ಮಾತನಾಡಿದ್ದೆ. ಸದ್ಯಕ್ಕೆ ವಿಷಯ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು