ಬೆಂಗಳೂರು, ನ. 02 (DaijiworldNews/HR): ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಳ್ಳ ದೇವರಾಜ್ ಎಂಬಾತನನ್ನು ರಾಜಾನುಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಎಸ್ಪಿ ಕೋನವಂಶಿಕೃಷ್ಣ ಅವರು ಈ ಕುರಿತು ಮಾಹಿತಿ ನೀಡಿದ್ದು, ಹತ್ಯೆಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಪ್ರಕರಣದ ತನಿಖೆಗೆ ಒಂದು ತಂಡವನ್ನು ರಚಿಸಲಾಗಿದ್ದು, ತನಿಖೆ ಚುರುಕಿನಿಂದ ನಡೆಯುತ್ತಿದೆ" ಎಂದರು.
ಇನ್ನು ವಿಶ್ವನಾಥ್ ಅವರು ರಾಜಾನುಕುಂಟೆ ಠಾಣೆಗೆ ಬಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋಗಳನ್ನು ನೀಡಿದ್ದಾರೆ. ಅವುಗಳನ್ನು ಹೆಚ್ಚಿನ ತನಿಖೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸದ್ಯದಲ್ಲಿಯೇ ಪೊಲೀಸರು ನೋಟೀಸ್ ನೀಡಲಿದ್ದಾರೆ.