ಬೆಂಗಳೂರು, ಡಿ.02 (DaijiworldNews/SM): ರಾಜ್ಯದಲ್ಲಿ ಇಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದ್ದು, ಅವರನ್ನು ಹಾಗೂ ಅವರ ಸಂಪರ್ಕಿತರನ್ನು ಐಸೋಲೇಟ್ ಮಾಡಲಾಗಿದೆ. ಈ ರೂಪಾಂತರಿ ವೈರಸ್ನಿಂದ ಜೀವಕ್ಕೆ ಅಪಾಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದಿರುವ ಅವರು, ಹೊರ ರಾಜ್ಯ, ಹೊರ ದೇಶಗಳಿಂದ ಬರುವವರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದೇವೆ. ಕೋವಿಡ್ ನಿಯಮಗಳನ್ನು ಜವಾಬ್ದಾರಿಯುತವಾಗಿ ಪಾಲಿಸೋಣ ಎಂದು ರಾಜ್ಯದ ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.
ಇನ್ನು ಈಮೈಕ್ರಾನ್ ವೈರಸ್ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಸದ್ಯದ ಅಧ್ಯಯನದ ಪ್ರಕಾರ ಈ ವೈರಸ್ ನಿಂದಾಗಿ ಯಾವುದೇ ರೀತಿಯಲ್ಲಿ ಜೀವಕ್ಕೆ ಅಪಾಯವಿಲ್ಲ ಎಂದು ತಿಳಿದುಬಂದಿದೆ. ದೈಹಿಕವಾಗಿ ಮಾಂಸಖಂಡಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸದ್ಯ ಸೋಂಕು ಪತ್ತೆಯಾದ ಇತರ ದೇಶಗಳಲ್ಲಿ ಯಾವ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ ಎಂಬುವುದನ್ನು ಪರೀಕ್ಷಿಸಿ ಮುಂದಿನ ದಿನಗಳಲ್ಲಿ ನಮ್ಮಲ್ಲೂ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದ್ದಾರೆ.