ಬೆಂಗಳೂರು, ಡಿ. 03 (DaijiworldNews/HR): ಭಾರತದಲ್ಲಿಯೂ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ವಿಮಾನ ನಿಲ್ದಾಣ
ನವೆಂಬರ್ 12 ಮತ್ತು 22 ರ ನಡುವೆ ದಕ್ಷಿಣ ಆಫ್ರಿಕಾದಿಂದ ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದು, ಆರೋಗ್ಯ ಇಲಾಖೆಯು ಅವರನ್ನು ಕೊರೊನಾ ಪರೀಕ್ಷೆಗೊಳಪಡಿಸಲು ಮುಂದಾಗಿದೆಯಾದರೂ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರ ಫೋನ್ಗಳು ಸ್ವಿಚ್ ಆಫ್ ಅಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಅವರೇ ಮಾಹಿತಿ ನೀಡಿದ್ದು, "ನಮ್ಮ ಪೊಲೀಸ್ ವ್ಯವಸ್ಥೆ ಸಮರ್ಥವಾಗಿದ್ದು, ನಾಪತ್ತೆಯಾದವರ ಬಗ್ಗೆ ಶೀಘ್ರದಲ್ಲೇ ಮಾಹಿತಿ ಕಲೆಹಾಕುತ್ತೇವೆ" ಎಂದು ಹೇಳಿದ್ದಾರೆ.