ನವದೆಹಲಿ, ಡಿ.03 (DaijiworldNews/SM): ಕೋವಿಡ್ ರೂಪಾಂತರಿ ಹೊಸ ಓಮೈಕ್ರಾನ್ ತಳಿ ಪತ್ತೆಯಾಗಿರುವ ರಾಷ್ಟ್ರಗಳಿಂದ ಇಲ್ಲಿಯ ತನಕ ಭಾರತಕ್ಕೆ ಸುಮಾರು 16 ಸಾವಿರ ಪ್ರಯಾಣಿಕರು ಆಗಮಿಸಿದ್ದು, ಅವರನ್ನು ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 18 ಮಂದಿ ಪ್ರಯಾಣಿಕರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ತಿಳಿಸಿದ್ದಾರೆ.
ಹೈ ರಿಸ್ಕ್ ರಾಷ್ಟ್ರಗಳಿಂದ ಬಂದಂತಹ ಪ್ರಯಾಣಿಕರಿಗೆ ಜೀನೊಮ್ ಸೀಕ್ವೆನ್ಸಿಂಗ್ ನಡೆಯುತ್ತಿರುವುದಾಗಿ ಮಾಹಿತಿ ನೀಡಿದರು. ಕೇಂದ್ರ ಸರಕಾರ ಈಗಾಗಲೇ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಆ ಮೂಲಕ ಮುಂದಿನ ಎಲ್ಲಾ ಸವಾಲುಗಳನ್ನು ಕೇಂದ್ರ ಸರಕಾರ ಎದುರಿಸಲಿದೆ. ಮುಂದಿನ ದಿನಗಳಲ್ಲಿ ಎಲ್ಲಾ ರಾಜ್ಯಗಳಿಗೆ ಔಷಧ ಪೂರೈಕೆಗೆ ಕ್ರಮ ಜರಗಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಇನ್ನು ಈಗಾಗಲೇ ಚರ್ಚೆಯಾಗಿರುವಂತೆ ಮಕ್ಕಳಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು. ವೈಜ್ಞಾನಿಕ ಸಲಹೆಗಳನ್ನು ಪಡೆದು ಲಸಿಕೆ ನೀಡಲಾಗುತ್ತಿದ್ದು, ವಿಜ್ಞಾನಿಗಳ ಮೇಲೆ ನಂಬಿಕೆ ಇಡುವಂತೆ ಅವರು ಮನವಿ ಮಾಡಿದ್ದಾರೆ.