ಬೆಂಗಳೂರು, ಡಿ.03 (DaijiworldNews/SM): ರಾಜ್ಯದಲ್ಲಿ ಓಮೈಕ್ರಾನ್ ಪತ್ತೆಯಾದ ಬಳಿಕ ರಾಜ್ಯ ಸರಕಾರ ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮಕೈಗೊಳ್ಳುತ್ತಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ನಿಯಮಗಳನ್ನು ಸರಕಾರ ಜಾರಿಗೆ ತಂದಿದೆ. ಈ ನಡುವೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲೂ ಕೂಡ ಸೋಂಕು ನಿಯಂತ್ರಣಕ್ಕೆ ಅಗತ್ಯ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
"ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಗೆ ಸಿದ್ಧತೆಯ ಬಗ್ಗೆ ಇಂದು ಸಭೆಯಲ್ಲಿ ಚರ್ಚಿಸಲಾಯಿತು. ಸಂಭವನೀಯ ಮೂರನೇ ಅಲೆ ತಪ್ಪಿಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ರಾಜ್ಯದಲ್ಲಿರುವ ವೈದ್ಯಕೀಯ ಕಾಲೇಜುಗಳನ್ನು ಸಿದ್ಧಗೊಳಿಸಲಾಗಿದೆ.
18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಜೊತೆಗೆ ಜಿಲ್ಲಾಮಟ್ಟದಲ್ಲಿ ತೃತೀಯ ಹಂತದ ಆರೋಗ್ಯ ಸೇವೆ ನೀಡಲು 21 ವೈದ್ಯಕೀಯ ಕಾಲೇಜುಗಳನ್ನು ಸಿದ್ಧಪಡಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.