ನವದೆಹಲಿ, ಡಿ.04 (DaijiworldNews/PY): "ಜನರ ನೋವು ಹಾಗೂ ಸಂಕಷ್ಟಕ್ಕೆ ಬಾರದ ಕೇಂದ್ರ ಸರ್ಕಾರ ನಿದ್ರಿಸುತ್ತಿದೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಜನರು ನೋವು, ಸಂಕಷ್ಟದಲ್ಲಿರುವಾಗ ಭಾರತ ಸರ್ಕಾರ ನಿದ್ರಿಸುತ್ತಿದೆ. ಅವರನ್ನು ಎಚ್ಚರಗೊಳಿಸೋಣ" ಎಂದಿದ್ದಾರೆ.
ಈ ವಿಚಾರದ ಸಂಬಂಧ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದ್ದು, "ಕೊರೋನಾ ದೇಶಕ್ಕೆ ವಕ್ಕರಿಸಿದ ಮೊದಲ ದಿನದಿಂದಲೂ ಜನರನ್ನು ಪ್ರತಿ ಹಂತದಲ್ಲೂ ಜೀವ ಹಿಂಡಿದ್ದು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊನೆಗೆ ಸ್ಮಶಾನದಲ್ಲಿಯೂ ಜನರನ್ನು ಕ್ಯೂ ನಿಲ್ಲಿಸಿದರು. ಸರ್ಕಾರದ ಬೇಜವಾಬ್ದಾರಿಯಿಂದಾಗಿ ಪ್ರಾಣ ಬಿಟ್ಟವರ ಕುಟುಂಬಗಳಿಗೆ ₹4 ಲಕ್ಷ ಪರಿಹಾರ ನೀಡಲೇಬೇಕು" ಎಂದು ಒತ್ತಾಯಿಸಿದೆ.