ಚಿಕ್ಕಮಗಳೂರು, ಡಿ 05 (DaijiworldNews/MS): ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀಗೋಡಿನ ಜವಾಹರ್ ನವೋದಯ ವಿದ್ಯಾಲಯದ 32 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಪ್ರಾರಂಭದಲ್ಲಿ ನಾಲ್ವರು ಸಿಬ್ಬಂದಿ ಮತ್ತು ಮೂವರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಬಳಿಕ 25 ವಿದ್ಯಾರ್ಥಿಗಳನ್ನು ಪರೀಕ್ಷಿಸಿದಾಗ ಕೋವಿಡ್-19 ಪಾಸಿಟಿವ್ ಬಂದಿದೆ. ಹಲವು ವಿದ್ಯಾರ್ಥಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎನ್.ಕೆ.ರಮೇಶ್ ಹೇಳಿದ್ದಾರೆ.
ಸೋಂಕು ತಗುಲಿದ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಸಿಬ್ಬಂದಿಯನ್ನು ಐಸೊಲೇಶನ್ಗೆ ಒಳಪಡಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸೇರಿದಂತೆ 418 ಮಂದಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ವಿವರಿಸಿದ್ದಾರೆ.