ಬೆಂಗಳೂರು, ಡಿ.05 (DaijiworldNews/HR): ಪೊಲೀಸ್ ಅಧಿಕಾರಿಗಳ ಕುರಿತು ಟೀಕೆ ಮಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಮರ್ಥಿಸಿಕೊಂಡ ಸರ್ಕಾರದ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂ ಅವರಿಗೆ ತಮ್ಮ ಕೆಲಸ ನಿರ್ವಹಣೆ ಮಾಡಲು ಆಗದೇ ಇದ್ದರೆ ರಾಜೀನಾಮೆ ನೀಡಬೇಕು. ಅವರ ಇಲಾಖೆಯಲ್ಲಿ ಭ್ರಷ್ಟಾಚಾರ ಕೊಳೆತು ನಾರುತ್ತಿದೆ ಎನ್ನುವುದು ಮನವರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ" ಎಂದರು.
ಇನ್ನು ವೇಳೆ ಗೃಹ ಸಚಿವ ಹೇಳಿಕೆ ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಸಮಯದಿಂದಲೂ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರುವಲ್ಲಿ ವಿಫಲರಾಗಿದ್ದಾರೆ" ಎಂದಿದ್ದಾರೆ.