ನವದೆಹಲಿ,ಡಿ 05 (DaijiworldNews/MS): ಭಾರತದಲ್ಲಿ ಒಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣ ಕಾಣಿಸಿಕೊಂಡಿದೆ. ತಾಂಜಾನಿಯಾದಿಂದ ದೆಹಲಿಗೆ ಆಗಮಿಸಿದ ವ್ಯಕ್ತಿಯೊಬ್ಬರಲ್ಲಿ ಕೊವೀಡ್ ರೂಪಾಂತರಿ ಒಮಿಕ್ರಾನ್ ಸೋಂಕು ದೃಢವಾಗಿದ್ದು, ಲೋಕನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ (ಎಲ್ಎನ್ಜೆಪಿ) ಅವರನ್ನು ದಾಖಲಿಸಲಾಗಿದೆ.
ಭಾರತದಲ್ಲಿ ಓಮಿಕ್ರಾನ್ನ ಮೊದಲ ಎರಡು ಪ್ರಕರಣಗಳು ಈ ವಾರದ ಆರಂಭದಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ಮತ್ತೆಯಾಗಿತ್ತು. ಉಳಿದ ಎರಡು ಪ್ರಕರಣಗಳು ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪತ್ತೆಯಾಗಿತ್ತು.
"ಇನ್ನೂ 17 ಮಂದಿಯಲ್ಲಿ ಕೊವಿಡ್ 19 ಸೋಂಕು ಕಾಣಿಸಿಕೊಂಡಿದ್ದು, ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೋಗಿಯ ಪ್ರಯಾಣದ ಇತಿಹಾಸವನ್ನು ಒಟ್ಟುಗೂಡಿಸಲಾಗುತ್ತಿದೆ ಮತ್ತು ಸಂಪರ್ಕಗಳನ್ನು ಪತ್ತೆಹಚ್ಚಲಾಗುತ್ತಿದೆ" ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ.
ನವೆಂಬರ್ 25 ರಂದು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮರ್ಥ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.