ಗುವಾಹಟಿ, ಡಿ.05 (DaijiworldNews/HR): ನಾಗಲ್ಯಾಂಡ್ ನ ಮೊನ್ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಹೊಣೆಯನ್ನು ಭಾರತೀಯ ಸೇನೆ ಹೊತ್ತುಕೊಂಡಿದೆ ಎಂದು ತಿಳಿದು ಬಂದಿದೆ.
ಗುಪ್ತಚರ ಇಲಾಖೆಯಿಂದ ದಂಗೆಕೋರರ ಚಲನವಲನದ ಖಚಿತ ಮಾಹಿತಿ ಪಡೆದ ಬಳಿಕ ತಿರು, ಮೊನ್ ಜಿಲ್ಲೆ, ನಾಗಾಲ್ಯಾಂಡ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ನಡೆಸಲು ಯೋಜಿಸಲಾಯಿತು ಎಂದು ವರದಿಯಾಗಿದೆ.
ಈ ಕುರಿತು ನಾಗಲ್ಯಾಂಡ್ ನ ಡಿಮಪುರ್ ಮೂಲದ 3 ಕಾರ್ಪ್ಸ್ ಹೇಳಿಕೆಯಲ್ಲಿ, "ನಾಗರಿಕರ ಸಾವಿದೆ ಕಾರಣ ಪತ್ತೆಹಚ್ಚಲು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದಿದೆ.
ಘಟನೆಯಲ್ಲಿ ಭದ್ರತಾ ಪಡೆ ಯೋಧರಿಗೆ ತೀವ್ರ ಗಾಯಗಳಾಗಿದ್ದು, ಸೈನಿಕರೊಬ್ಬರು ತೀವ್ರ ಗಾಯದಿಂದ ಹುತಾತ್ಮರಾಗಿದ್ದಾರೆ ಎಂದು ಹೇಳಿದೆ.