ನವದೆಹಲಿ, ಡಿ.05 (DaijiworldNews/HR): ಉದ್ಯೋಗಕ್ಕಾಗಿ ಲಖನೌನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶ ಸರ್ಕಾರ ಉದ್ಯೋಗ ಕೇಳಿದವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದು, ಇದನ್ನು ಜನರು ಬಿಜೆಪಿ ಮತಯಾಚನೆಗೆ ಬಂದಾಗ ನೆನಪಿಸಿಕೊಳ್ಳಬೇಕು" ಎಂದಿದ್ದಾರೆ.
ಇನ್ನು 2019ರ ಉತ್ತರ ಪ್ರದೇಶ ಶಿಕ್ಷಕರ ಅರ್ಹತಾ ಪರೀಕ್ಷೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಆರೋಪಿಸಿ ಲಖನೌನಲ್ಲಿ ಶನಿವಾರ ಸಂಜೆ ಮೇಣದಬತ್ತಿ ಅಭಿಯಾನ ನಡೆಸಿದ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದಾಗಿ ವರದಿಯಾಗಿದೆ.
ರಾಹುಲ್ ಗಾಂಧಿ ಅವರು ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಘಟನೆಯ ವಿಡಿಯೊವನ್ನು ಹಂಚಿಕೊಂಡಿದ್ದಾರೆ.