ಅತ್ತಿಬೆಲೆ, ಡಿ.05 (DaijiworldNews/HR): ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದ್ದು, ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹುನ್ನಾರ ಕಾಂಗ್ರೆಸ್ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ, ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ ಅತ್ಯಂತ ಕೀಳು ಮಟ್ಟದ್ದಾಗಿದ್ದು, ಕಾಂಗ್ರೆಸ್ ನ ನೈತಿಕತೆ ಕೆಳಮಟ್ಟಕ್ಕೆ ಇಳಿದಿರುವುದು ಬಹಳ ಸ್ಪಷ್ಟವಾಗಿದೆ" ಎಮ್ದರು.
ಇನ್ನು "ಸಿದ್ದರಾಮಯ್ಯ ಅವರು ಬಿಜೆಪಿ ಯಾವಾಗಲೂ ಹಣಬಲ ಹಾಗೂ ತೋಳ್ಬಲದಿಂದ ಗೆಲ್ಲುತ್ತಾರೆಂದು ದೂರುತ್ತಾರೆ. ಆದರೆ ಈ ಕೆಲಸವನ್ನು ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ . ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಚುನಾವಣೆವರೆಗೂ ಹಣ ಚೆಲ್ಲುತ್ತಿರುವ ನಿಮಗೆ ಯಾವ ನೈತಿಕತೆ ಇದೆ ?" ಎಂದು ಪ್ರಶ್ನಿಸಿದ್ದಾರೆ.