ಬೆಂಗಳೂರು, ಡಿ.05 (DaijiworldNews/SM): ರಾಜ್ಯದಲ್ಲಿ ಇಂದು ಅಲ್ಪ ಪ್ರಮಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಪ್ರಕರಣಗಳು ಕಂಡುಬಂದಿವೆ.
ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದೆ. ಅಲ್ಲದೆ, ಇಂದು ಕೋರೋನಾದಿಂದಾಗಿ 4 ಸೋಂಕಿತರು ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 330 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7,132ಕ್ಕೆ ಕುಸಿದಿದೆ.
ಇನ್ನು ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ ಅತ್ಯಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 256 ಮಂದಿ ಬೆಂಗಳೂರಿಗರಲ್ಲಿ ಪಾಸಿಟಿವ್ ದೃಢಪಟ್ಟಿದೆ.