ಮೈಸೂರು, ಡಿ.06 (DaijiworldNews/PY): "ಜೆಡಿಎಸ್ 2023ರಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದಲ್ಲಿ ಪಕ್ಷವನ್ನೇ ಮುಚ್ಚುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಡಿಎಸ್ ಚುನಾವಣೆ ಪ್ರಚಾರದ ಸಂದರ್ಭ ಮಾತನಾಡಿದ ಅವರು, "ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ರೂಪಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ಅದನ್ನು ಜಾರಿ ಮಾಡುತ್ತೇವೆ. ಇಲ್ಲದಿದ್ದಲ್ಲಿ ಪಕ್ಷವನ್ನೇ ಮುಚ್ಚುತ್ತೇವೆ" ಎಂದಿದ್ದಾರೆ.
"ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಎಲ್ಕೆಜಿಯಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು" ಎಂದು ಹೇಳಿದ್ದಾರೆ.