ಚಿಕ್ಕಮಗಳೂರು, ಡಿ. 06 (DaijiworldNews/HR): ಕೊರೊನಾ ಪ್ರಕರಣಗಳು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಸಿಗೋಡುನಲ್ಲಿರುವ ನವೋದಯಾ ವಿದ್ಯಾಲಯದಲ್ಲಿ ಮತ್ತೆ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.
ಭಾನುವಾರ ಶಾಲೆಯಲ್ಲಿ 69 ಪ್ರಕರಣಗಳು ಪತ್ತೆಯಾಗಿದ್ದು, ಇವತ್ತು ಮತ್ತೆ 38 ಕೇಸ್ ಪತ್ತೆ ಒಟ್ಟು 94 ವಿದ್ಯಾರ್ಥಿಗಳು, 13 ಶಿಕ್ಷಕರರು ಸೇರಿದಂತೆ 107 ಮಂದಿಗೆ ಸೋಂಕು ದೃಢವಾಗಿದೆ.
ಸಿಗೋಡುನಲ್ಲಿರುವ ವಸತಿ ಶಾಲೆಯಲ್ಲಿ ಮೊದಲು ಶಿಕ್ಷಕರಿಗೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಬಳಿಕ 418 ವಿದ್ಯಾರ್ಥಿಗಳು, ಸಿಬ್ಬಂದಿಗಳ ಸ್ವ್ಯಾಬ್ ಪಡೆದಿದ್ದ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಿತ್ತು. 418 ರಲ್ಲಿ 107 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಸೋಂಕು ಪತ್ತೆಯಾದವರಲ್ಲಿ ಯಾವುದೇ ಲಕ್ಷಣಗಳಿಲ್ಲದ ಕಾರಣ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.