ಆನೇಕಲ್, ಡಿ. 06 (DaijiworldNews/HR): ಜನ ಬಲವಿಲ್ಲದೆ ಹಣದಿಂದ ಮತದಾರರನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಜನಬಲ ಇಲ್ಲದಿದ್ದರೆ ಹಣದ ಮುಖಾಂತರವೇ ಚುನಾವಣೆ ಗೆಲ್ಲಬೇಕೆಂದು ಹಣವಿರುವ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ, ಹಣ ಖರ್ಚು ಮಾಡಿ, ಜೊತೆಗೆ ಪಕ್ಷಕ್ಕೂ ನೀಡಿ, ಯಾವುದೇ ಮಾರ್ಗ ಅನುಸರಿಸಿ ಚುನಾವಣೆ ಗೆಲ್ಲಬೇಕೆನ್ನುವ ಅವರ ಚಿಂತೆನೆ ಅತ್ಯಂತ ಕೀಳು ಮಟ್ಟದ್ದಾಗಿದೆ" ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು "ಸಿದ್ದರಾಮಯ್ಯ ಅವರು ಬಿಜೆಪಿ ಯಾವಾಗಲೂ ಹಣಬಲ ಹಾಗೂ ತೋಳ್ಬಲದಿಂದ ಗೆಲ್ಲುತ್ತಾರೆಂದು ದೂರುತ್ತಾರೆ. ಆದರೆ ಈ ಕೆಲಸವನ್ನು ಮಾಡುತ್ತಿರುವುದು ಕಾಂಗ್ರೆಸ್ ಪಕ್ಷ, ಅಭ್ಯರ್ಥಿ ಆಯ್ಕೆಯಿಂದ ಹಿಡಿದು ಚುನಾವಣೆವರೆಗೂ ಹಣ ಚೆಲ್ಲುತ್ತಿರುವ ನಿಮಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.