ಹುಬ್ಬಳ್ಳಿ, ಡಿ. 06 (DaijiworldNews/HR): "ವಿಧಾನ ಪರಿಷತ್ ಚುನಾವಣೆ ಮತ್ತು ಅಧಿವೇಶನ ಸದ್ಯಕ್ಕೆ ನಮ್ಮ ಮುಂದೆ ಇದ್ದು, ಆದಾದ ಬಳಿಕ ಹೈಕಮಾಂಡ್ ನಿರ್ಧಾರ ಆಧರಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮುಂಜಾಗ್ರತಾ ಕ್ರಮವಾಗಿ ಹಲವಾರು ಸಲಹೆಗಳು ಬರುತ್ತಿದ್ದು, ಎಲ್ಲವನ್ನು ತಜ್ಞರ ಮುಂದೆ ಇಟ್ಟು ಅವರ ಸೂಚನೆ ಮೇರೆಗೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದರು.
ಇನ್ನು ಒಮಿಕ್ರಾನ್ ಮತ್ತು ಡೆಲ್ಟಾಗಳು ಪ್ರಾಥಮಿಕ ಹಂತದಲ್ಲಿದ್ದು, ತಜ್ಞರ ಸಲಹೆಯನ್ನು ಆಧರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು" ಎಂದಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಯಾರು ಗೊಂದಲ ಹೇಳಿಕೆ ನೀಡಿಲ್ಲ. ಈ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿಯನ್ನು ಕೇಳಿ ಎಂದು ಹೇಳಿದ್ದಾರೆ.