ನವದೆಹಲಿ, ಡಿ.06 (DaijiworldNews/SM): ಪ್ರಧಾನಿ ನರೇಂದ್ರ ಮೋದಿ-ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ-ರಷ್ಯಾ ನಡುವಿನ ದ್ವಿಪಕ್ಷೀಯ ಶೃಂಗ ಸಭೆಯಲ್ಲಿ ಭಾಗವಹಿಸಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಇದು ಭಾರತ ಹಾಗೂ ರಷ್ಯಾ ನಡುವಿನ 21 ನೇ ವಾರ್ಷಿಕ ಶೃಂಗ ಸಭೆಯಾಗಿದೆ.
ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಇಬ್ಬರು ನಾಯಕರು ಭೇಟಿಯಾಗಿದ್ದಾರೆ. 2019 ರ ಬ್ರಿಕ್ಸ್ ಶೃಂಗಸಭೆಯ ಪಾರ್ಶ್ವದಲ್ಲಿ ಭೇಟಿ ಮಾಡಿದ್ದ ಬಳಿಕ ಮೋದಿ-ಪುಟಿನ್ ಅವರ ಮೊದಲ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಸಚಿವರ ದ್ವಿಪಕ್ಷೀಯ ಸಭೆ ನಡೆಸಿದ್ದರು. ಎಕೆ-203 ಅಸಾಲ್ಟ್ ರೈಫಲ್ ಗಳನ್ನು ಭಾರತಕ್ಕೆ ಪೂರೈಕೆಗೆ ಮಾಡುವ ಕುರಿತಂತೆ ಉಭಯ ರಾಷ್ಟ್ರಗಳು ಸಹಿ ಹಾಕಿದವು.