ಹುಬ್ಬಳ್ಳಿ, ಡಿ.07 (DaijiworldNews/HR): ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೊಮ್ಮಾಯಿ ಸುಳ್ಳು ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, "ಸಿದ್ದರಾಮಯ್ಯ ಅವರು ಓರ್ವ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಮೇಲೆ ನಮಗೆ ಬಹಳ ಗೌರವವಿತ್ತು" ಎಂದರು.
ಇನ್ನು ಕೊರೊನಾದ ಮೂರನೆ ಅಲೆ ತಡೆಗಟ್ಟಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬೇಗ ಟೆಸ್ಟ್ ವರದಿ ಬರುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ"ಎಂದಿದ್ದಾರೆ.
ದೇಶದಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ, ಆದರೆ ತೀವ್ರತೆ ಕಡಿಮೆ ಎಂಬ ಮಾಹಿತಿ ಇದ್ದು, ಜನರು ಎಚ್ಚರದಿಂದ ಇರುವ ಅಗತ್ಯವಿದೆ" ಎಂದು ಹೇಳಿದ್ದಾರೆ.