ಬೆಂಗಳೂರು, ಡಿ.07 (DaijiworldNews/PY): "ಬಿಜೆಪಿಗೆ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕರೆ ಮನವಿ ಮಾಡಿದ್ದೇನೆ" ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಲ್ಲಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿದ್ದೇನೆ. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದು, ಅಲ್ಲಿ ಸ್ಪಷ್ಟಪಡಿಸಲಿದ್ದಾರೆ. ಎಲ್ಲೆಲ್ಲಿ ಅಭ್ಯರ್ಥಿಗಳಿಲ್ಲವೋ ಆ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸುವ ವಿಶ್ವಾಸವಿದೆ" ಎಂದಿದ್ದಾರೆ.
"ಈ ಬಾರಿ ನಾವು ಪರಿಷತ್ ಚುನಾವಣೆಯಲ್ಲಿ 15ಕ್ಕೂ ಅಧಿಕ ಸೀಟ್ ಗೆಲ್ಲುತ್ತೇವೆ. ಬಿಜೆಪಿ ಬಗ್ಗೆ ಕಾಂಗ್ರೆಸ್ ಪಕ್ಷದವರು ಹಗುರವಾಗಿ ಮಾತನಾಡುತ್ತಿದ್ದಾರೆ. ನಾನು ಅವರ ಬಗ್ಗೆ ಏನೂ ಹೇಳುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಅದಕ್ಕೆ ಜನರೇ ಉತ್ತರಿಸಲಿದ್ದಾರೆ" ಎಂದು ಹೇಳಿದ್ದಾರೆ.