ಬೆಂಗಳೂರು, 07 (DaijiworldNews/MS): ಬಿಜೆಪಿ ಪಕ್ಷ ಅದೆಷ್ಟು ದುರ್ಬಲವಾಗಿದೆ ಎನ್ನುವುದಕ್ಕೆ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವುದೇ ಸಾಕ್ಷಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಜೆಡಿಎಸ್ ಜತೆ ಹೋಗುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ಹೇಳಿರುವುದು ಬಿಜೆಪಿಗೆ ಅದೆಂಥ ದುಸ್ಥಿತಿ ಬಂದಿದೆ ಎಂಬುದನ್ನು ಸಾರುತ್ತಿದೆ. ಕಾಂಗ್ರೆಸ್ ಬಗ್ಗೆ ಜೆಡಿಎಸ್-ಬಿಜೆಪಿಯವರಿಗೆ ಭಯ ಉಂಟಾಗಿದೆ. ಪರಸ್ಪರ ಹೊಂದಾಣಿಕೆ ಅವರಿಬ್ಬರಿಗೂ ಅನಿವಾರ್ಯವಾಗಿದೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ಬಿಜೆಪಿಗೂ ಅನಿವಾರ್ಯವಾಗಿದೆ. ನಾವು ಬಿಡಿ, ಮೊದಲಿಂದಲೂ ಬಿಜೆಪಿ ಜತೆ ಅಂತರ ಕಾಯ್ದುಕೊಂಡಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ
ಕೇಂದ್ರ ಹಾಗೂ ರಾಜ್ಯ ಎರಡೂ ಕಡೆ ಬಿಜೆಪಿ ಸರಕಾರವೇ ಆಳ್ವಿಕೆಯಲ್ಲಿದೆ. ಆದರೂ ಅವರಿಗೆ ಸ್ವಂತ ಬಲದ ಮೇಲೆ ನಂಬಿಕೆ ಇಲ್ಲ. ಜೆಡಿಎಸ್ ಮೇಲೆ ಅವಲಂಬಿತವಾಗಲು ಮುಂದಾಗಿದೆ. ಶಿವಮೊಗ್ಗ ಸೇರಿ ಹಲವೆಡೆ ಅವರ ಅಭ್ಯರ್ಥಿಗಳು ಸೋಲುತ್ತಿದ್ದಾರೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇರೆ ಬೇಕಿಲ್ಲ ಎಂದರು.