ಮೈಸೂರು, ಡಿ.07 (DaijiworldNews/HR): ಸಿದ್ದರಾಮಯ್ಯ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರದ್ದು ಅಪಹಾಸ್ಯದ ಮೈತ್ರಿ, ಒಂದಾಗಿರೋದು ನಗೆಪಾಟಲಿಗೀಡಾಗಿದೆ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನತಾ ಪರಿವಾರ ಕಟ್ಟುತ್ತೇನೆಂದು ಓಡಾಡಿದ್ದರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 35 ಸಾವಿರ ಮತಗಳಿಂದ ಸೋತರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ" ಎಂದರು.
ಇನ್ನು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿ ಇದೀಗ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ನಿಮ್ಮ ಸ್ಥಾನವನ್ನು ಮೊದಲು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ" ಎಂದಿದ್ದಾರೆ.
ಈಗಾಗಲೇ ಚಿಮ್ಮನಕಟ್ಟಿ ಸಿದ್ದರಾಮಯ್ಯ ಅವರ ಬಗೆ ವಿರೋಧ ವ್ಯಕ್ತಪಡಿಸಿದ್ದಾರೆ, ಇನ್ನು ಅನೇಕರು ನಿಮ್ಮದೇ ಪಕ್ಷದವರು ವಿರೋಧ ವ್ಯಕ್ತಪಡಿಸಲಿದ್ದಾರೆ" ಎಂದು ಹೇಳಿದ್ದಾರೆ.