ಬೆಳಗಾವಿ, ಡಿ.07 (DaijiworldNews/PY): "ಶಾಸಕ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ತಮ್ಮ, ಸತೀಶ ಜಾರಕಿಹೊಳಿ ಅವರನ್ನು ಸೋಲಿಸಿ, ಬಿಜೆಪಿಯ ಮಂಗಲಾ ಅಂಗಡಿ ಅವರನ್ನು ಗೆಲ್ಲಿಸಿದ್ದನ್ನು ಮರೆಯಬಾರದು" ಎಂದು ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, "ಪ್ರಚಾರಕ್ಕೆ ಇನ್ನು ಕೆಲವೇ ದಿನಗಳು ಬಾಳಿ ಉಳಿದಿವೆ. ಈ ವೇಳೆ ರಮೇಶ ಜಾರಕಿಹೊಳಿ ಅವರು ಹೀಗೆ ಮಾಡುತ್ತಿದ್ದಾರೆ, ಹಾಗೆ ಮಾಡುತ್ತಿದ್ದಾರೆ ಎನ್ನುತ್ತಿದ್ದಾರೆ. ನಾವು ಈ ಚುನಾವಣೆಯಲ್ಲೂ ಪ್ರಾಮಾಣಿಕವಾಗಿ ಬಿಜೆಪಿ ಪರ ಕೆಲಸ ಮಾಡುತ್ತಿದ್ದೇವೆ" ಎಂದಿದ್ದಾರೆ.
"ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ, ಬಿಜೆಪಿಯನ್ನು ಗೆಲ್ಲಿಸಿ ಎಂದು ಹೇಳುತ್ತಿದ್ಧೇವೆ. ಇದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.