ನವದೆಹಲಿ, ಡಿ.07 (DaijiworldNews/HR): ದೆಹಲಿಯ ಗಡಿಭಾಗದಲ್ಲಿ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮೃತಪಟ್ಟ ರೈತ ಕುಟುಂಬದ ಸದಸ್ಯರಿಗೆ ಪರಿಹಾರ ಹಾಗೂ ಉದ್ಯೋಗ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದ ಅವರು, "ಪ್ರತಿಭಟನೆಯ ವೇಳೆ ಸಾವನ್ನಪ್ಪಿರುವ ರೈತರ ಅಂಕಿ ಅಂಶಗಳ ದಾಖಲೆ ಇಲ್ಲ ಎಂದು ಹೇಳಿರುವುದು ಕೇಂದ್ರ ಸರ್ಕಾರದ ಅಸಾಮರ್ಥ್ಯವನ್ನು ತೋರಿಸುತ್ತದೆ ಎಂದಿರುವ ಅವರು, ಅಲ್ಲದೇ ಪ್ರತಿಭಟನೆ ವೇಳೆ ಸಾವನ್ನಪ್ಪಿರುವ ರೈತ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಿರುವ ರೈತ ಕುಟುಂಬದ ಪಟ್ಟಿಯನ್ನು ಲೋಕಸಭೆಗೆ ನೀಡಿದ್ದಾರೆ.
ಇನ್ನು ರೈತ ಪ್ರತಿಭಟನೆ ಮತ್ತು ಸಾವಿನ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಸಂಸದರು ಒತ್ತಾಯಿಸಿದ್ದು, ಬಳಿಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಸಂದರ್ಭದಲ್ಲಿ 700 ರೈತರು ಸಾವನ್ನಪ್ಪಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಅವರು ಕ್ಷಮೆಯಾಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.