ಚೆನ್ನೈ, ನ 08 (DaijiworldNews/MS): ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ವೊಂದು ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿದೆ.
ಅದರಲ್ಲಿ ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು ನಾಲ್ವರು ಸಿಬ್ಬಂದಿ ಇದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು ಕಡೆಗೆ ಹೊರಟಿತ್ತು.
ಅವರಲ್ಲಿ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರು ಪತ್ತೆಯಾಗಲಿಲ್ಲ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.