ಮುಂಬೈ, ಡಿ.08 (DaijiworldNews/PY): ನವಿ ಮುಂಬೈನ ಟುರ್ಬೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಂ ಕಮ್ ಗೋಡೌನ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಬಿಎಂಡಬ್ಲ್ಯೂ ಕಾರುಗಳು ಸುಟ್ಟು ಭಸ್ಮವಾಗಿವೆ.
ಈ ಬಗ್ಗೆ ಎಂಐಡಿಸಿ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ಮಾಹಿತಿ ನೀಡಿದ್ದು, "ಅವಘಡದಲ್ಲಿ ಯಾರೂ ಮೃತಪಟ್ಟ ಕುರಿತು ವರದಿಯಾಗಿಲ್ಲ. ಮುಂಜಾನೆ 5.30ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಅಲ್ಲಿ ನಿಲ್ಲಿಸಿದ್ದ ಕಾರುಗಳು ಸುಟ್ಟು ಕರಕಲಾಗಿವೆ" ಎಂದು ತಿಳಿಸಿದ್ದಾರೆ.
ಬೆಂಕಿಯ ತೀವ್ರತೆ ಹೆಚ್ಚಾಗಿ ಇದ್ದ ಕಾರಣ ಎಂಐಡಿಸಿ ಪ್ರದೇಶದ ಅಗ್ನಿಶಾಮಕ ದಳದ ಸಿಬ್ಬಂದಿ, ವಾಹನಗಳು ಸಾಕಾಗಲಿಲ್ಲ. ಒಟ್ಟು 10 ಫ್ಐರ್ ಟ್ರಕ್ಗಳನ್ನು ತರಲಾಗಿತ್ತು. ಬೆಂಕಿ ನಂದಿಸಲು ಸುಮಾರು 6 ಗಂಟೆಗಳು ಬೇಕಾಯಿತು ಎಂದು ವರದಿಯಾಗಿದೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬೆಂಕಿಯಲ್ಲಿ ಕನಿಷ್ಠ 40-45 ಬಿಎಂಡಬ್ಲ್ಯು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿ ಅವಘಡದಿಂದ ಕೋಟ್ಯಾಂತರ ರೂ. ನಷ್ಟವಾಗಿದೆ.