ನವದೆಹಲಿ, ಡಿ.08 (DaijiworldNews/PY): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವಾಯುಸೇನೆ ಅಧಿಕೃತವಾಗಿ ತಿಳಿಸಿವೆ.
ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಎಂಐ-17 ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕುನ್ನೂರಿನಲ್ಲಿ ಪತನಗೊಂಡಿತ್ತು.
ಘಟನೆಯಲ್ಲಿ ಬಿಪಿನ್ ರಾವತ್ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ. ಉಳಿದ ಹನ್ನೊಂದು ಮಂದಿಯ ಶವವನ್ನು ಹೊರಕ್ಕೆ ತೆಗೆಯಲಾಗಿದ ಎಂದು ವರದಿ ತಿಳಿಸಿತ್ತು. ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿದಂತೆ ಎಲ್ಲಾ 14 ಮಂದಿ ಮೃತಪಟ್ಟಿದ್ದಾರೆ.