ಧಾರವಾಡ, ಡಿ.09 (DaijiworldNews/PY): ಧಾರವಾಡದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್ ಆರ್ ಮೋರೆ (84) ಅವರು ಧಾರವಾಡದ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.
ಅನಾರೋಗ್ಯದ ಹಿನ್ನೆಲೆ ಮೋರೆ ಅವರನ್ನು ಧಾರವಾಡ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಎಸ್ ಆರ್ ಮೋರೆ ಅವರು ದ. ಮಾಜಿ ಸಿಎಂ ಬಂಗಾರಪ್ಪ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇವರು ಬಂಗಾರಪ್ಪ ಅವರ ಅವಧಿಯಲ್ಲಿ ಸಹಕಾರ ಸಚಿವ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು.