ನವದೆಹಲಿ, ಡಿ 09 (DaijiworldNews/MS): ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್ನಲ್ಲಿ ಅನುಮಾನಾಸ್ಪದವಾದಂತ ಹೆಚ್ಚು ಪ್ರಭಲವಲ್ಲದ ಸ್ಪೋಟಕ ವಸ್ತುವೊಂದು, ಸ್ಪೋಟಗೊಂಡ ಪರಿಣಾಮ, ಓರ್ವ ವ್ಯಕ್ತಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ನ್ಯಾಯಾಲಯ ಆವರಣದಲ್ಲಿ ಇಂದು ಬೆಳಿಗ್ಗೆ ಸಣ್ಣ ಪ್ರಮಾಣದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ಈ ಘಟನೆಯ ನಂತರ ಎಲ್ಲಾ ನ್ಯಾಯಾಲಯದ ಕಲಾಪಗಳನ್ನು ತಕ್ಷಣವೇ ನಿಲ್ಲಿಸಲಾಯಿತು. ಹಾಗೇ, ಸ್ಫೋಟದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು.ಸ್ಫೋಟದ ನಂತರ ಎಲ್ಲಾ ವಕೀಲರು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಓಡಿಬಂದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಆಗಮಿಸಿ, ಪರಿಶೀಲನೆ ನಡೆಸುತ್ತಿವೆ
ನ್ಯಾಯಾಲಯದಲ್ಲಿದ್ದ ಲ್ಯಾಪ್ಟಾಪ್ ಸ್ಫೋಟಗೊಂಡಿರಬಹುದು ಎಂದು ಪ್ರಾಥಮಿಕ ವರದಿಗಳು ಹೇಳುತ್ತವೆ. ಆದರೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.