ಹಾವೇರಿ, ಡಿ.10 (DaijiworldNews/HR): ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಪಿನ್ ರಾವತ್ ಅವರ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿಯುತಿದೆ, ಅದರೆ ಕೆಲವರು ಅವರ ಸಾವನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕುತ್ತಿರುವ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ" ಎಂದರು.
ಇನ್ನು ಬಿಪಿನ್ ರಾವತ್ ಅವರ ಸಾವಿನ ಕುರಿತು ಅನೇಕ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿ ಸಂಭ್ರಮಿಸುತ್ತಿದ್ದು, ಅಂತವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.