ದಾವಣಗೆರೆ, ಡಿ.10 (DaijiworldNews/HR): ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯೆ ನೀಡುವ ಗುರುವಿಗೇ ಕುಚೇಷ್ಟೆ ಮಾಡಿ, ಹಲ್ಲೆ ಮಾಡಿ ವಿಕೃತ ಖುಷಿ ಮೆರೆದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ನಲ್ಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಕಾಶ್ ಬೋಗಾರ್ ವಿದ್ಯಾರ್ಥಿಗಳ ಅವರಿಗೆ ವಿದ್ಯಾರ್ಥಿಗಳು ಹಿಂದೆಯಿಂದ ವಸ್ತುಗಳನ್ನು ಎಸೆಯುವುದು, ಕಸದ ಬುಟ್ಟಿಯನ್ನು ತಲೆ ಮೇಲೆ ಹಾಕುವುದು, ಹೊಡೆಯುವುದು ಮಾಡಿದ್ದಾರೆ. ಈ ವಿಷಯ ತಿಳಿದ ಪ್ರಾಂಶುಪಾಲರು ವಿದ್ಯಾರ್ಥಿಗಳು ಪೋಷಕರನ್ನು ಕರೆಸಿ ಮತ್ತೆ ಇಂತಹ ಘಟನೆ ನಡೆದರೆ ಶಿಸ್ತು ಕ್ರಮ ತೆಗೆದುಕೊಳ್ಳವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಶಾಲೆಗೆ ಭೇಟಿ ನೀಡಿ ಶಾಲೆಯ ಶಿಕ್ಷಕರು, ಪ್ರಾಂಶುಪಾಲರು, ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದ್ದು ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳು ಈ ರೀತಿ ಕೀಟಲೆ ಮಾಡಿ ಅವರೆ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು, ಇದೀಗ ಆ ವಿಡಿಯೋ ಸಮಾಜಿ ಜಾಲ ತಣಗಳಲ್ಲಿ ಹರಿದಾಡುತ್ತಿದೆ.