ಶ್ರೀನಗರ, ಡಿ.10 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ನಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಗೆ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಹುತಾತ್ಮರಾಗಿರುವ ಪೊಲೀಸರನ್ನು ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹಮದ್ ಎಂದು ಗುರುತಿಸಲಾಗಿದೆ.
ಇನ್ನು ಪೊಲೀಸರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳವನ್ನು ಸುತ್ತುವರೆದ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.