ಗೋಕಾಕ,ಡಿ.10 (DaijiworldNews/HR): ವಿಧಾನಪರಿಷತ್ ಚುನಾವಣೆಯಲ್ಲಿ ಗೋಕಾಕ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲುವುದು ಖಚಿತ, ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನಾನು ಬಿಜೆಪಿ ಶಾಸಕ. ನಮ್ಮ ಪ್ರಥಮ ಆದ್ಯತೆ ಬಿಜೆಪಿ ಗೆಲ್ಲಬೇಕು ಎನ್ನುವುದೇ ಆಗಿದೆ. ಕಾಂಗ್ರೆಸ್ ಸೋಲಿಸುವುದಕ್ಕೆ ಕೆಲಸ ಮಾಡಲಾಗಿದೆ. ಜಿಲ್ಲೆಯ ಸ್ಥಳೀಯ ಸಂಸ್ಥೆಗಳ 300ಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ನನಗೆ ಕರೆ ಮಾಡಿ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ" ಎಂದರು.
ಇನ್ನು "ಕಾನೂನಿನಲ್ಲಿ ಅವಕಾಶವಿದ್ದರೆ ಮುಂದಿನ ಬಾರಿ ತೀಶ ಜಾರಕಿಹೊಳಿ ಮನೆನಲ್ಲೇ ಮತಗಟ್ಟೆಗಳನ್ನು ಸ್ಥಾಪಿಸಿ ಚುನಾವಣೆ ನಡೆಸೋಣ. ಸತೀಶ ಜಾರಕಿಹೊಳಿ ಹತಾಶೆಯಾಗಿ ಮಾತನಾಡುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ.