ಜಮ್ಮುಕಾಶ್ಮೀರ, ಡಿ.10 (DaijiworldNews/SM): ಕಣಿವೆ ರಾಜ್ಯದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದಾರೆ. ಭಾರತೀಯ ಸೈನಿಕರನ್ನು ಗುರಿಯಾಗಿಸಿ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.
'ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುಲ್ಶನ್ ಚೌಕ್ನಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಭಾರತದ ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದರು. ಅವರನು ತಕ್ಷಣ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಚಿಂತಾಜನಕ ಸ್ಥಿತಿಯಲ್ಲಿದ ಪೊಲೀಸರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಘಟನೆ ನಡೆದ ಭಾಗದಲ್ಲಿ ಭಾರತೀಯ ಯೋಧರು ಕಾರ್ಯಾಚರಣೆ ನಡೆಸುತ್ತಿದ್ದು, ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ಮುಂದುವರೆಸಲಾಗಿದೆ. ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಇಬ್ಬರು ಹುತಾತ್ಮರಾದ ಯೋಧರಾಗಿದ್ದಾರೆ.