ನವದೆಹಲಿ, ಡಿ.10 (DaijiworldNews/SM): ದೇಶದಲ್ಲಿ ಕೃಷಿ ಕಾಯ್ದೆ ವಿರುದ್ಧ ನಡೆದ ಹೋರಾಟದಲ್ಲಿ ರೈತರು ಸಾವನಪ್ಪಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಜಾರಿಗೆ ತಂದ ಕೃಷಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ನಡೆಸಿದ್ದು, ಈ ಹೋರಾಟದ ಸಂದರ್ಭದಲ್ಲಿ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಯ ವಿರುದ್ಧ ರೈತರು ಒಂದು ವರ್ಷಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 700ಕ್ಕೂ ಅಧಿಕ ರೈತರು ಸಾವನ್ನಪ್ಪಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಆದರೆ, ಈ ಬಗ್ಗೆ ಸದನದಲ್ಲಿ ಮಾಹಿತಿ ನೀಡಿರುವ ಕೃಷಿ ಸಚಿವರು, ರೈತರ ಹೋರಾಟದ ಸಂದರ್ಭದಲ್ಲಿ ಪೊಲೀಸರು ಕೈಗೊಂಡ ಕ್ರಮದಿಂದಾಗಿ ಯಾವುದೇ ರೈತ ಪ್ರಾಣ ಕಳೆದುಕೊಂಡಿಲ್ಲ ಎಂಬುವುದಾಗಿ ಸ್ಪಷ್ಟನೆ ನೀಡಿದ್ದಾರೆ.