ಶ್ರೀನಗರ, ಡಿ.12 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬರಗಾಮ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.