ಬೆಂಗಳೂರು, ಡಿ.12 (DaijiworldNews/HR): ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಎಂ.ಎಲ್.ಸಿ ಸಿ.ಎಂ. ಇಬ್ರಾಹಿಂ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸದನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಜನರ ಗಮನ ಬೇರೆಡೆ ಸೆಳೆಯಲು ಮತಾಂತರ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಬಲವಂತದ ಮತಾಂತರ ಮಾಡುವಂತಿಲ್ಲ ಎಂದು ಸಂವಿಧಾನದಲ್ಲೇ ಇದೆ. ಸಂವಿಧಾನದಲ್ಲೇ ಇದ್ದ ಮೇಲೆ ರಾಜ್ಯ ಸರ್ಕಾರ ಮತಾಂತರ ನಿಷೇಧ ವಿಧೇಯಕ ಏಕೆ ಮಂಡಿಸುತ್ತಿದ್ದಾರೆ?" ಎಂದುಪ್ರಶ್ನಿಸಿದ್ದಾರೆ.
ಇನ್ನು ರಾಜ್ಯದ ಜನರ ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಇದರ ಅರ್ಥ ರಾಜ್ಯ ಸರ್ಕಾರ ಎಲ್ಲದರಲ್ಲೂ ವಿಫಲವಾಗಿದೆ" ಎಂದು ಹೇಳಿದ್ದಾರೆ.