ಬೆಂಗಳೂರು,ಡಿ.12 (DaijiworldNews/HR): ಹೆಲಿಕಾಪ್ಟರ್ ದುರಂತದಲ್ಲಿ ಗಾಯಾಳಾಗಿ ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ.
ಸಚಿವರು ವರುಣ್ ಸಿಂಗ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದು, ಈ ವೇಳೆ ಕರ್ನಾಟಕ ಪೊಲೀಸ್ ಮುಖ್ಯಸ್ಥ ಶ್ರೀ ಪ್ರವೀಣ್ ಸೂದ್ ಉಪಸ್ಥಿತರಿದ್ದರು.
ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ವರುಣ್ ಸಿಂಗ್ ಒಬ್ಬರೇ ಬದುಕುಳಿದಿದ್ದು, ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿ ಸಾವನ್ನಪ್ಪಿದ್ದರು.
ಇನ್ನು ವರುಣ್ ಸಿಂಗ್ ಅವರನ್ನು ತಮಿಳುನಾಡಿನ ವೆಲ್ಲಿಂಗ್ಟನ್ನಿಂದ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.