ಬೆಂಗಳೂರು, ಡಿ.12 (DaijiworldNews/HR): ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, "ಮತಾಂತರ ನಿಷೇಧ ಕಾಯ್ದೆಯನ್ನು ಯಾವ ಕಾರಣಕ್ಕೂ ಜಾರಿಗೆ ಬಿಡಲ್ಲ. ದುರುದ್ದೇಶ ಪೂರ್ವಕವಾಗಿ ಬಿಜೆಪಿ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿದೆ. ಇಂತಹ ಕಾಯ್ದೆ ಜಾರಿಗೆ ಅವಕಾಶವಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆ ಮಾಡಲು ಸಿದ್ಧತೆ ನಡೆಸಿದ್ದು, ಕಾಯ್ದೆ ಜಾರಿ ವಿಚಾರ ರಾಜ್ಯಾದ್ಯಂತ ಭಾರಿ ಚರ್ಚೆಯಾಗುತ್ತಿದ್ದು,ಕಾಂಗ್ರೆಸ್ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.