ಬೆಂಗಳೂರು ಡಿ.12 (DaijiworldNews/PY): ಮತಾಂತರ ವಿರೋಧಿ ಕಾಯ್ದೆಯನ್ನು ಬಿಜೆಪಿ ನೇತೃತ್ವದ ಸರ್ಕಾರವು ಪರಿಚಯಿಸಲು ಯೋಚಿಸುತ್ತಿರುವಾಗ, ಮುಂಬರುವ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಅದಕ್ಕೆ ವಿರೋಧ ವ್ಯಕ್ತಪಡಿಸಲು ರಾಜ್ಯ ಕಾಂಗ್ರೆಸ್ ಪ್ರತಿಜ್ಞೆ ಮಾಡಿದ್ದು, "ಇದು ಕ್ರಿಶ್ಚಿಯನ್ನರನ್ನು ಗುರಿಯಾಗಿಸುವ ಉದ್ಧೇಶ ಹೊಂದಿದೆ" ಎಂದು ದೂರಿದೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, "ಈ ಕಾಯ್ದೆಯನ್ನು ಸರ್ಕಾರ ಯಾವುದೇ ರೂಪದಲ್ಲಿ ಮಂಡಿಸಿದರೂ ಅದನ್ನು ನಾವು ವಿರೋಧಿಸುತ್ತೇವೆ" ಎಂದಿದ್ದಾರೆ.
"ಈ ಕಾನೂನನ್ನು ಸರ್ಕಾರವು ಪ್ರಸ್ತಾಪಿಸು ಮೂಲಕ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಕೊಡುಗೆಗಳಲ್ಲಿ ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. 2025ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಇದನ್ನು ಮಾಡುತ್ತಿದೆ" ಎಂದು ಹೇಳಿದ್ದಾರೆ.
"ಸಚಿವ ಕೆ ಎಸ್ ಈಶ್ವರಪ್ಪ ಅವರು ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸಲು ಹಾಗೂ ರಕ್ಷಿಸಲು ಸರ್ಕಾರವು ಮತಾಂತರ ವಿರೋಧ ಕಾಯ್ದೆಯನ್ನು ಪರಿಚಯಿಸಲು ಯೋಜಿಸುತ್ತಿದೆ" ಎಂದು ಇತ್ತೀಚೆಗೆ ತಿಳಿಸಿದ್ದರು.