ಬೆಂಗಳೂರು, ಡಿ.12 (DaijiworldNews/SM): ಕರ್ನಾಟಕದಲ್ಲಿ ಮೂರನೇ ಓಮಿಕ್ರಾನ್ ಪ್ರಕರಣ ರವಿವಾರ ದೃಢಪಟ್ಟಿದ್ದು, ಈ ಬಗ್ಗೆ ಖುದ್ದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರೇ ಸ್ಪಷ್ಟಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.